/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ
Image

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು.

ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದೇ ವೇಳೆ ಉತ್ತಮವಾಗಿ ಸೇವೆ ಸಲ್ಲಿಸಿದ್ದ ಪೌರಕಾರ್ಮಿಕರಿಗೆ, ನಿವೃತ್ತ ನೀರುಗಂಟಿ, ಪ್ರತಿಭಾವಂತ ವಿದ್ಯಾರ್ಥಿಗೆ ಸನ್ಮಾನಿಸಿ ಗೌರವಿಸಿದರು. ಕ್ರೀಡಾಕೂಟದಲ್ಲಿ ಭಾಗವಹಿಸಿ ಜಯಗಳಿದ್ದ ಪೌರಕಾರ್ಮಿಕರಿಗೆ ಬಹುಮಾನವನ್ನು ವಿತರಿಸಿದರು.

ಕಾರ್ಯಕ್ರಮದ ನಂತರ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಪೌರಕಾರ್ಮಿಕರಿಗೆ ಎಲೆ ಹಾಕಿ ಸಿಹಿ ಬಡಿಸಿ ಊಟ ಬಡಿಸುವ ಮೂಲಕ ಉತ್ತಮ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ರಾಜೇಂದ್ರ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ತೋಟೇಶ್, ನಗರಸಭೆ ಪೌರಯುಕ್ತರು ರುದ್ರಮ್ಮ ಶರಣಯ್ಯ, ತಾ.ಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ನಗರಸಭೆ ಮಾಜಿ ಅಧ್ಯಕ್ಷ ರೇಖಾ, ಮಾಜಿ ಸದಸ್ಯರು, ಪೌರ ಕಾರ್ಮಿಕರ ಸಂಘದ ರಾಜಣ್ಣ ಹಾಗೂ ಇತರರು ಇದ್ದರು.

ವರದಿ- ನಿಂಪು ಸುರೇಶ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top