/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ- ಸೆಸ್ಕಾಂ ಎಇಇ ಎಂ.ರಾಜು ಅವರಿಗೆ ಗ್ಯಾರಂಟಿ ಯೋಜನೆಗಳ ಸಮಿತಿ ವತಿಯಿಂದ ಸನ್ಮಾನ
Image

ಕೊಳ್ಳೇಗಾಲ- ಸೆಸ್ಕಾಂ ಎಇಇ ಎಂ.ರಾಜು ಅವರಿಗೆ ಗ್ಯಾರಂಟಿ ಯೋಜನೆಗಳ ಸಮಿತಿ ವತಿಯಿಂದ ಸನ್ಮಾನ

ಕೊಳ್ಳೇಗಾಲ: ಮಾರ್ಚ್ ತಿಂಗಳ 30 ರಂದು ಸೇವೆಯಿಂದ ನಿವೃತ್ತಿ ಹೊಂದಲಿರುವ ಕೊಳ್ಳೇಗಾಲ ಸೆಸ್ಕಾಂ ಎಇಇ ಎಂ.ರಾಜು ಅವರನ್ನು ಕೊಳ್ಳೇಗಾಲ ತಾಲ್ಲೂಕು ಗ್ಯಾರೆಂಜಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಗೌರವ ಸನ್ಮಾನ ಮಾಡಲಾಯಿತು.

ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಇಂದು ನಡೆದ ಗ್ಯಾರೆಂಟಿ ಯೋಜನೆಗಳ ಪರಿಶೀಲನೆ ಸಭೆಯ ನಂತರ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ ಅವರು ಸೆಸ್ಕಾಂ ಎಇಇ ಎಂ.ರಾಜು ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.

ಈ ವೇಳೆ ಮಾತನಾಡಿದ ಅವರು, ನಿಮ್ಮ ಸೇವೆ ಮತ್ರು ಕರ್ತವ್ಯ ಉತ್ತಮವಾಗಿದೆ. ರಾಷ್ಟ್ರೀಯ ಹಬ್ಬಗಳ ಆಚರಣೆ ಸಂಧರ್ಭದಲ್ಲಿ ವಿದ್ಯುತ್ ದೀಪಾಲಂಕಾರ ಸೇರಿದಂತೆ ಕಾರ್ಯಕ್ರಮಗಳಲ್ಲಿ ನಿಮ್ಮ ಕರ್ತವ್ಯ ಶ್ಲಾಘನೀಯ ಎಂದು ಪ್ರಶಂಸೆಯನ್ನು ವ್ಯಕ್ತಪಡಿಸಿದರು.

ಸನ್ಮಾನ ಸ್ವೀಕರಿಸಿದ ಎಇಇ ಎಂ.ರಾಜು ಅವರು ಮಾತನಾಡಿ, ಈ ದಿನ ನನಗೆ ಗೌರವ ಸನ್ಮಾನ ನೀಡಿದ್ದು ನನಗೆ ಸಂತೋಷವಾಗಿದೆ. ಸೇವೆ ಅವಧಿಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿದ ತೃಪ್ತಿ ಸಹ ನನಗಿದೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸಗಳಿಗೆ ನಾನು ಸದಾ ಅಭಾರಿಯಾಗಿರುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ರಾಜೇಂದ್ರ ಮತ್ತು‌ ಸದಸ್ಯರಾದ ರಾಜೇಗೌಡ, ಹರ್ಷ,ಮತ್ತು ಸಮಿತಿಯ ಎಲ್ಲಾ ಸದಸ್ಯರು ಇದ್ದರು.

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top