/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ ಪಟ್ಟಣದ ಜಿ.ಪಿ.ಮಲ್ಲಪ್ಪಪುರಂ ಬಡಾವಣೆಯಲ್ಲಿ ‌ರಸ್ತೆಗಾಗಿ ಕಟ್ಟಡಗಳ ತೆರವು
Image

ಕೊಳ್ಳೇಗಾಲ ಪಟ್ಟಣದ ಜಿ.ಪಿ.ಮಲ್ಲಪ್ಪಪುರಂ ಬಡಾವಣೆಯಲ್ಲಿ ‌ರಸ್ತೆಗಾಗಿ ಕಟ್ಟಡಗಳ ತೆರವು

ಕೊಳ್ಳೇಗಾಲ. ಪಟ್ಟಣದ ಜಿ.ಪಿ.ಮಲ್ಲಪ್ಪಪುರಂ ಬಡಾವಣೆಯ 5 ನೇ ಕ್ರಾಸ್ ರಸ್ತೆಯ ಅತಿಕ್ರಮವನ್ನು ಒತ್ತುವರಿಯನ್ನು ಇಂದು ನಗರಸಭೆ ವತಿಯಿಂದ ತೆರವು ಮಾಡಿದರು.


ಜಿಲ್ಲಾಧಿಕಾರಿ ಹಾಗೂ ಲೋಕಯುಕ್ತರ ಆದೇಶದ ಮೇರೆಗೆ ಇಂದು ಮುಂಜಾನೆಯಿಂದ ನಗರಸಭೆ ಪೌರಯುಕ್ತರು ರಮೇಶ್‌ ರವರ ನೇತೃತ್ವದಲ್ಲಿ ಜೆಸಿಬಿ ಯಂತ್ರಗಳ ಮೂಲಕ ತೆರವು ಕಾರ್ಯಚರಣೆ ನಡೆಸಿದರು.


ಈ ವೇಳೆ ಪೌರಯುಕ್ತ ರಮೇಶ್ ಅವರು ಮಾತನಾಡಿ, ಸಾರ್ವಜನಿಕರ ಅನುಕೂಲಕ್ಕಾಗಿ ರಸ್ತೆಗಳನ್ನು ತೆರಳಿಸುವುದು ಹಾಗೂ ನಗರ ಸ್ವಚ್ಛತೆಗೆ ಇದು ಅವಶ್ಯಕ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ನಿರ್ಮಾಣಗಳು ನಗರ ದಾರಿಗಳ ಸರಿಯಾದ ಬಳಕೆಗಾಗಿ ತೊಂದರೆ ಉಂಟುಮಾಡುತ್ತಿವೆ. ಮುಂದಿನ ದಿನಗಳಲ್ಲಿ ಇಂತಹ ಅಕ್ರಮದ ವಿರುದ್ಧ ಕ್ರಮ ನಿರಂತರವಾಗಿರಲಿದೆ, ಎಂದು ಹೇಳಿದರು.


ಅಭಿವೃದ್ಧಿಗೆ ಅಡ್ಡಿಯಾಗುತ್ತಿರುವ ಯಾವುದೇ ಅಕ್ರಮವನ್ನು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ನಗರಸಭೆ ಈ ಮೂಲಕ ನೀಡಿದೆ.


ಕಾರ್ಯಾಚರಣೆಯಲ್ಲಿ ನಗರಸಭೆ ಎಇಇ ನಟರಾಜು, ಪ್ರಸನ್ನ, ಅರೋಗ್ಯ ಅಧಿಕಾರಿ ಚೇತನ್ ಕುಮಾರ್, ಕಂದಾಯ ನಿರೀಕ್ಷಕ ರವಿಶಂಕರ್, ನಂಜುಂಡಶೆಟ್ಟಿ ಹಾಗೂ ಸಿಬ್ಬಂದಿಗಳು ಇದ್ಧರು. ಪಟ್ಟಣ ಪೊಲೀಸರು ಯಾವುದೇ ಅಹಿತಕರ ಘಟನೆಗಳು ಉಂಟಾಗದಂತೆ ಬಿಗಿಭದ್ರತೆ ವಹಿಸಿದ್ದರು.

ವರದಿ ; ನಿಂಪು ರಾಜೇಶ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top