/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಚಾಮರಾಜನಗರಕ್ಕೆ ಉಪ ಲೋಕಾಯುಕ್ತರ ಭೇಟಿ – ಹಾಸ್ಟೆಲ್ ವ್ಯವಸ್ಥೆ ಕಂಡು ಅಸಮಾಧಾನ
Image

ಚಾಮರಾಜನಗರಕ್ಕೆ ಉಪ ಲೋಕಾಯುಕ್ತರ ಭೇಟಿ – ಹಾಸ್ಟೆಲ್ ವ್ಯವಸ್ಥೆ ಕಂಡು ಅಸಮಾಧಾನ

ವಿವಿಧ ಹಾಸ್ಟೆಲ್ ಗಳಿಗೆ ಉಪಲೋಕಾಯುಕ್ತರ ಭೇಟಿ, ಪರಿಶೀಲನೆ : ಕೆಲ ಹಾಸ್ಟೆಲ್ ಸೌಲಭ್ಯದ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ತರಾಟೆ

    ಚಾಮರಾಜನಗರ,- ಕರ್ನಾಟಕ ರಾಜ್ಯ ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರು ಇಂದು ನಗರದ ವಿವಿಧ ಹಾಸ್ಟೆಲ್‍ಗಳಿಗೆ ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲನೆ ನಡೆಸಿದರು.

  ನಗರದ ಕರ್ನಾಟಕ ಕಸ್ತೂರ ಬಾ ಗಾಂಧಿ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗಳನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವಸತಿ ನಿಲಯದಲ್ಲಿ ಮಂಚ ಇಲ್ಲದಿರುವುದು, ನೆಲದ ಮೇಲಿನ ಹಾಸಿಗೆ ಮೇಲೆ ಹೊದಿಕೆ ಇಲ್ಲದಿರುವುದನ್ನು ಕಂಡು ಆಕ್ರೋಶ  ವ್ಯಕ್ತಪಡಿಸಿದರು. ಸ್ನಾನದ ಗೃಹ, ಶೌಚಾಲಯಗಳನ್ನು ವೀಕ್ಷಿಸಿ ಅಲ್ಲಿ ನೀರು ಹರಿಯದೆ ನಿಂತಿದ್ದನ್ನು ಕಂಡು ಖಾರವಾಗಿ ಪ್ರಶ್ನಿಸಿದರು. ಇನ್ನಿತರ ಸೌಲಭ್ಯಗಳನ್ನು ಕಲ್ಪಿಸದೆ ಇರುವ ಬಗ್ಗೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

  ಇದೇ ವೇಳೆ ಹಾಸ್ಟೆಲ್ ವ್ಯಾಪ್ತಿಯ ನಿರ್ವಹಣೆಯ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರಾದ ವಿದ್ಯಾಕುಮಾರಿಯವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಉಪಲೋಕಾಯುಕ್ತರು ಸ್ಥಳೀಯ ಹಾಸ್ಟೆಲ್ ಗಳಿಗೆ ಸಮರ್ಪಕವಾಗಿ ಸೌಲಭ್ಯಗಳನ್ನು ಇನ್ನು 2 ತಿಂಗಳೊಳಗೆ ಕಲ್ಪಿಸುವಂತೆ ತಿಳಿಸಿದರು.

 ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಉಪಲೋಕಾಯುಕ್ತರು ಊಟ, ವಸತಿ, ಹೊದಿಕೆಗಳು, ಪುಸ್ತಕಗಳು ಹೇಗೆ ನೀಡಲಾಗುತ್ತಿದೆ ಎಂಬುದನ್ನು ಕೇಳಿ ವಿವರ ಪಡೆದರು. ಸ್ಥಳದಲ್ಲಿಯೇ ಇದ್ದ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಕಾಂತ ಪಾಟೀಲ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಶೆಟ್ಟಿ, ವಸತಿ  ನಿಲಯದ ನಿರ್ವಹಣೆ ಹೊತ್ತಿರುವ ಮುಖ್ಯ ಶಿಕ್ಷಕರಾದ ಮಹದೇವಸ್ವಾಮಿ ಅವರನ್ನು ಸರಿಯಾಗಿ ವ್ಯವಸ್ಥೆ ಕಲ್ಪಿಸದೇ ಇರುವ ಬಗ್ಗೆ ತರಾಟೆಗೆ ತೆಗೆದುಕೊಂಡರು. ವಸತಿ ನಿಲಯಕ್ಕೆ ಮೂಲಸೌಲಭ್ಯಗಳನ್ನು ಸರಿಯಾಗಿ ಕಲ್ಪಿಸದೇ ಇರುವ ಬಗ್ಗೆ ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಳ್ಳುವಂತೆ ಸೂಚಿಸಿದರು. 

  ವಸತಿ ನಿಲಯಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಶೀಘ್ರವೇ ಮುಂದಾಗಬೇಕು. ಮೆನು ಪ್ರಕಾರ ಊಟ ತಿಂಡಿ ಉಪಹಾರ ನೀಡಬೇಕು. ಮಕ್ಕಳ ಭವಿಷ್ಯವನ್ನು ಹಗುರವಾಗಿ ತೆಗೆದುಕೊಳ್ಳಬಾರದು. ನಿರ್ಲಕ್ಷ್ಯ ಮುಂದುವರೆಸಿದರೆ ಗಂಭೀರ ಕ್ರಮ ವಹಿಸಲಾಗುತ್ತದೆ ಎಂದು ಸ್ಥಳದಲ್ಲೇ ಇದ್ದ ಶಿಕ್ಷಣಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. 

  ಇದಕ್ಕೂ ಮೊದಲು ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಭೇಟಿ ಕೊಟ್ಟು ಅಲ್ಲಿನ ಸೌಕರ್ಯಗಳನ್ನು ಪರಿಶೀಲನೆ ನಡೆಸಿದರು.      ವಿದ್ಯಾರ್ಥಿನಿಯರ ಕೊಠಡಿಗಳು, ಊಟದ ಹಾಲ್, ಶೌಚಾಲಯ, ಇನ್ನಿತರ ಸೌಲಭ್ಯಗಳನ್ನು ವೀಕ್ಷಿಸಿದರು. 

 ವಿದ್ಯಾರ್ಥಿನಿಯರೊಂದಿಗೆ ಮಾತನಾಡಿ ಕಲ್ಪಿಸಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಇದೇ ವೇಳೆ ಪ್ರತಿ ಕೊಠಡಿಯಲ್ಲೂ ಪುಸ್ತಕ, ಇನ್ನಿತರ ಸಾಮಗ್ರಿಗಳನ್ನು ಇಟ್ಟುಕೊಳ್ಳಲು ಪ್ರತ್ಯೇಕ ಕಪಾಟುಗಳನ್ನು ನಿರ್ಮಿಸಬೇಕು, ಉದ್ದನೆಯ ಕನ್ನಡಿಗಳನ್ನೂ ಸಹ ಅಳವಡಿಸಬೇಕು ಎಂದು ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

  ಮಕ್ಕಳೊಂದಿಗೆ ಸಂವಾದ ನಡೆಸಿದ ಉಪ ಲೋಕಾಯುಕ್ತರು ಏನೇನು ಸೌಲಭ್ಯಗಳು ನಿಮಗೆ ಕೊರತೆಯಾಗಿದೆ ಎಂಬುದನ್ನ ಕೇಳಿ ತಿಳಿದುಕೊಂಡರು. ವಿದ್ಯಾರ್ಥಿಗಳ ಅಹವಾಲುಗಳನ್ನು ಆಲಿಸಿದ ವೇಳೆ ಸ್ನಾನದ ಬಿಸಿ ನೀರಿಗಾಗಿ ಈಗಿರುವ ಗೀಜರ್,ಸೋಲಾರ್  ಜೊತೆಗೆ ಹೆಚ್ಚುವರಿಯಾಗಿ ಇನ್ಸಟೆಂಟ್ ಗೀಜರ್ ಗಳನ್ನು ಸಹ ಅಳವಡಿಸಬೇಕು. ಪ್ರತಿ ಮಹಡಿಗು ನೀರಿನ ಕ್ಯಾನ್ ಗಳನ್ನು ಇಡಬೇಕು. ಊಟ ಉಪಹಾರ ಸಮರ್ಪಕವಾಗಿ ಸಿದ್ದಪಡಿಸಲು ನುರಿತ ಅಡುಗೆ ತಯಾರಕರಿಂದ ಹಾಸ್ಟೆಲ್ ಅಡುಗೆ ಮಾಡುವ ಸಿಬ್ಬಂದಿಗೆ ತರಬೇತಿ ಕೊಡಿಸಬೇಕು ಎಂದು ಉಪಲೋಕಾಯುಕ್ತರಾದ ಕೆ.ಎನ್.ಪಣೀಂದ್ರ ಅವರು ಸೂಚಿಸಿದರು. 

ಗ್ರಂಥಾಲಯ, ಕಂಪ್ಯೂಟರ್ ಗಳ ವ್ಯವಸ್ಥೆ ಮಾಡುವಂತೆಯು ತಿಳಿಸಿದರು.

ಸಿವಿಲ್ ನ್ಯಾಯಾಧೀಶರು ಮತ್ತು ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿಗಳಾದ ಕಿರಣ್ ಪಿ.ಎಂ.ಪಾಟೀಲ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ,ಲೋಕಾಯುಕ್ತ ಎಸ್.ಪಿ.ಯವರಾದ ಉದೇಶ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಲೋಕಾಯುಕ್ತ ಡಿವೈಎಸ್ ಪಿ ಗಜೇಂದ್ರ ಪ್ರಸಾದ್,ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಇತರರು ಇದೇ ಸಂದರ್ಭದಲ್ಲಿ ಇದ್ದರು.
ವರದಿ : ನಿಂಪು ಬ್ರದರ್ಸ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top