/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ – ಸ್ಲಮ್ ಬೋರ್ಡ್ ಮನೆಗಳಿಗೆ ಇ – ಸ್ವತ್ತು ನೀಡುವಂತೆ ಒತ್ತಾಯ
Image

ಕೊಳ್ಳೇಗಾಲ – ಸ್ಲಮ್ ಬೋರ್ಡ್ ಮನೆಗಳಿಗೆ ಇ – ಸ್ವತ್ತು ನೀಡುವಂತೆ ಒತ್ತಾಯ

ಕೊಳ್ಳೇಗಾಲ. ಇಲ್ಲಿನ ಮುಡಿಗುಂಡ ಮತ್ತು ಶಂಕನಪುರ ಬಡಾವಣೆಗಳ ಸ್ಲಮ್ ಬೋರ್ಡ್ ಮನೆಗಳಿಗೆ ಇ–ಸ್ವತ್ತು ಮತ್ತು ರಿಜಿಸ್ಟರ್ ಹಕ್ಕುಪತ್ರ ನೀಡಬೇಕೆಂದು ಒತ್ತಾಯಿಸಿ ಮಹಿಳಾ ವಾಸಿಗಳು ಪ್ರತಿಭಟನೆ ನಡೆಸಿದರು.
ನಗರಸಭೆಯ ಪೌರಯುಕ್ತರ ಕಚೇರಿಯ ಮುಂದೆ ಪ್ರತಿಭಟನಾಕಾರರು ಪ್ರತಿಭಟಿಸಿದರು.

ನಾವು ವರ್ಷಗಳಿಂದ ಶಂಕನಪುರದಲ್ಲಿ ವಾಸಿಸುತ್ತಿದ್ದರೂ ನಮ್ಮ ನಿವೇಶನಗಳಿಗೆ ಈವರೆಗೂ ಈ–ಸ್ವತ್ತು, ರಿಜಿಸ್ಟರ್ ಸೇರಿದಂತೆ ಯಾವುದೇ ಹಕ್ಕುಪತ್ರಗಳನ್ನು ನೀಡಿಲ್ಲ. ಅಧಿಕಾರಿಗಳ ಕಚೇರಿಗಳಿಗೆ ಹಲವು ಬಾರಿ ಓಡಾಡುತ್ತಿದ್ದೇವೆ. ಹಕ್ಕುಪತ್ರ ಪಡೆಯಲು ಅಗತ್ಯವಿರುವ ಎಲ್ಲ ದಾಖಲೆಗಳನ್ನು ಸಲ್ಲಿಸಿದ್ದೇವೆ. ಆದರೂ ಕಳೆದ ಮೂರು ವರ್ಷಗಳಿಂದ ಯಾವುದೇ ಸ್ಪಷ್ಟ ಉತ್ತರ ನೀಡದೇ ನಮ್ಮನ್ನು ಅಲೆಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇಂದು ನಾವು ಪ್ರತಿಭಟನೆ ನಡೆಸಿದ ನಂತರ ಅಧಿಕಾರಿಗಳು ಆರು ತಿಂಗಳೊಳಗೆ ಹಕ್ಕುಪತ್ರ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವು ದಾಗಿ ಭರವಸೆ ನೀಡಿದ್ದಾರೆ. ಅಧಿಕಾರಿಗಳು ಕೊಟ್ಟ ಅವಧಯಲ್ಲಿ ನಮ್ಮ ಬೇಡಿಕೆ ಈಡೇರಿಸದಿದ್ದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮಹಿಳಾ ಹೋರಾಟಗಾರ್ತಿ ಶಿವಮ್ಮ, ನಿವಾಸಿಗಳಾದ ಕವಿತಾ, ಸುಮ, ನಿಂಗಮ್ಮ, ರಾಧ, ಪುಟ್ಟನಂಜಮ್ಮ, ನಾಗವೇಣಿ, ದೀಪಾ, ಜಯಮ್ಮ, ಹಾಗು ಮಹದೇವ, ನಿಂಗರಾಜು ಸೇರಿದಂತೆ ಹಲವು ಮಂದಿ ಭಾಗವಹಿಸಿದ್ದರು.

  • ನಿಂಪುವಾರ್ತೆ

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top