/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಜನವರಿ 3 ರಿಂದ 7 ರವರೆಗೆ ಚಿಕ್ಕಲ್ಲೂರು ಜಾತ್ರೆ – ಶಾಸಕ ಮಂಜುನಾಥ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
Image

ಜನವರಿ 3 ರಿಂದ 7 ರವರೆಗೆ ಚಿಕ್ಕಲ್ಲೂರು ಜಾತ್ರೆ – ಶಾಸಕ ಮಂಜುನಾಥ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಚಿಕ್ಕಲ್ಲೂರು ಜಾತ್ರೆಯಲ್ಲಿ ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಿ : ಎಂ.ಆರ್.ಮಂಜುನಾಥ್ ಸೂಚನೆ

ಕೊಳ್ಳೇಗಾಲ.ಡಿ.12:- ಜನವರಿ 3 ರಿಂದ 7 ವರೆಗೆ ನಡೆಯುವ ಚಿಕ್ಕಲ್ಲೂರು ಜಾತ್ರೆಯಲ್ಲಿ ಭಕ್ತರಿಗೆ ಯಾವುದೇ ತೊಂದರೆಯಾ ” ಗದಂತೆ ಕ್ರಮವಹಿಸುವ ಜೊತೆಗೆ = ಮೂಲ ಸೌಕರ್ಯಗಳನ್ನು ಒದಗಿಸಲು ಹೆಚ್ಚಿನ ಒತ್ತು ನೀಡಬೇಕು ಎಂದು ಹನೂರು ಶಾಸಕ ಎಂ.ಆರ್.ಮಂಜುನಾಥ್ ಸೂಚನೆ ನೀಡಿದರು.

ತಾಲೂಕಿನ ಚಿಕ್ಕಲ್ಲೂರು ಶ್ರೀಸಿದ್ದಪ್ಪಾಜಿ ದೇವಸ್ಥಾನದ ಆವರಣದಲ್ಲಿ ಚಿಕ್ಕಲ್ಲೂರು ಜಾತ್ರಾ ಮಹೋತ್ಸವ ಪೂರ್ವ ಭಾವಿ ಸಭೆಯಲ್ಲಿ ಮಾತನಾ ಡಿದರು.

5 ದಿನಗಳ ಕಾಲ ನಡೆಯ ಲಿರುವ ಚಿಕ್ಕಲ್ಲೂರು ಜಾತ್ರೆಯಲ್ಲಿ 4 ಲಕ್ಷಕ್ಕೂ ಹೆಚ್ಚಿನ ಜನರು ಸೇರುವ ನಿರೀಕ್ಷೆ ಇದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ, ತಾಲೂ ಕು ಆಡಳಿತ ಹಾಗೂ ದೇವಸ್ಥಾನ ‘ದ ಆಡಳಿತ ಮಂಡಳಿ ಭಕ್ತರಿಗೆ ಅನುಕೂಲ ಕಲ್ಪಿಸಿಕೊಡುವ

ಮೂಲಕ ಜಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಈ ಬಾರಿಯ ಚಿಕ್ಕಲ್ಲೂರು ಜಾತ್ರೆಗೆ ಆಗಮಿಸುವ ಭಕ್ತರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ 150 ಸಾರಿಗೆ ಬಸ್‌ಗಳ ಸಂಚಾರಕ್ಕೆ ಕ್ರಮವಹಿಸಲಾಗಿದೆ. ಅಲ್ಲದೇ ಚಿಕ್ಕಲ್ಲೂರಿನಲ್ಲಿ ತಾತ್ಕಾಲಿಕವಾಗಿ ಆರೋಗ್ಯ ಕೇಂದ್ರ ತೆರೆಯಲಿದ್ದು, ಹಗಲು ಹಾಗೂ ರಾತ್ರಿ ತಲಾ ಇಬ್ಬರು ವೈದ್ಯರು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದರು.
ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಆಡಳಿತ ಕ್ರಮವಹಿಸಬೇಕು. ಅಲ್ಲದೇ ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು. ಚಿಕ್ಕಲ್ಲೂರು ಜಾತ್ರೆ ವೇಳೆ ನಿರಂತರ ವಿದ್ಯುತ್ ಒದಗಿಸಬೇಕು. ಅಲ್ಲದೇ ಪಂಕ್ತಿ ಸೇವೆ ದಿನ ಚೆಕ್‌ ಪೋಸ್ಟ್‌ಗಳಲ್ಲಿ ಭಕ್ತರು ತರುವ ಕುರಿ ಕೋಳಿಗಳನ್ನು ಹಿಡಿಯದೇ ಪಂಕ್ತಿ ಸೇವೆಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಮೋನಾರೋತ್, ಎಸ್ಪಿ ಡಾ.ಬಿ.ಟಿ.ಕವಿತಾ, ದೇವಸ್ಥಾನದ ಭರತ್ ರಾಜೇ ಅರಸ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ ಅಧಿಕಾರಿಗಳು, ಮುಖಂಡರು ಹಾಜರಿದ್ದರು.

  • ನಿಂಪುವಾರ್ತೆ

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top