/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಹನೂರು ಕ್ಷೇತ್ರಕ್ಕೆ ನೀರಾವರಿ ಯೋಜನೆಗೆ 490 ಕೋಟಿ – ಕೊಟ್ಟ ಮಾತಿನಂತೆ ನಡೆದ ಸಚಿವ ಮಹಾದೇವಪ್ಪ ಮತ್ತು ಸಂಸದ ಸುನೀಲ್ ಬೋಸ್
Image

ಹನೂರು ಕ್ಷೇತ್ರಕ್ಕೆ ನೀರಾವರಿ ಯೋಜನೆಗೆ 490 ಕೋಟಿ – ಕೊಟ್ಟ ಮಾತಿನಂತೆ ನಡೆದ ಸಚಿವ ಮಹಾದೇವಪ್ಪ ಮತ್ತು ಸಂಸದ ಸುನೀಲ್ ಬೋಸ್

ಕೊಳ್ಳೇಗಾಲ-ಪ್ರಸ್ತುತ ಬಜೆಟ್ ನಲ್ಲಿ ಹನೂರು ಕ್ಷೇತ್ರದ ನೀರಾವರಿ ಯೋಜನೆಗಳಿಗೆ 490 ಕೋಟಿ ಅನುದಾನ ನೀಡುವ ಮೂಲಕ ಕ್ಷೇತ್ರದ ಜನರಿಗೆ ಮತ್ತು ರೈತರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ಉತ್ತಮ ಕೊಡುಗೆ ನೀಡಿದೆ ಎಂದು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಸ್.ಶಿವಕುಮಾರ್ ಮಧುವನಹಳ್ಳಿ ಅವರು ತಿಳಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಸಚಿವ ಮಹಾದೇವಪ್ಪ ಮತ್ತು ಸುನೀಲ್ ಬೋಸ್ ಅವರು.. ಈ ಭಾಗದ ರೈತರ ನೀರಾವರಿ ಸಮಸ್ಯೆಗಳನ್ನು ಅರ್ಥ ಮಾಡಿ ಕೊಂಡು ಮುಂದಿನ ದಿನಗಳಲ್ಲಿ ನೀರಾವರಿ ಯೋಜನೆಗಳನ್ನು ರೂಪಿಸುವ ಮೂಲಕ ಹನೂರು ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಭರವಸೆಯನ್ನು ನೀಡಿದ್ದರು.
ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದು ಹನೂರು ನೀರಾವರಿ ಯೋಜನೆಗಳಿಗೆ ಬಜೆಟ್ ನಲ್ಲಿ ಒಪ್ಪಿಗೆ ಕೊಡಿಸಲಾಗಿದೆ. ಆ ಮೂಲಕ ಸಚಿವ ಮಹಾದೇವಪ್ಪ ಮತ್ತು ಸಂಸದ ಸುನೀಲ್ ಬೋಸ್ ಅವರು ಕ್ಷೇತ್ರದ ಜನತೆಗೆ ಮತ್ತು ರೈತರಿಗೆ ಕೊಟ್ಟ ಮಾತಿನಂತೆ ನಡೆದು ಕೊಂಡಿದ್ದಾರೆ.
ಮಾಜಿ ಶಾಸಕ ನರೇಂದ್ರ ಅವರೂ ಸಹ ಹನೂರು ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಬಜೆಟ್ ನಲ್ಲಿ ಒಪ್ಪಿಗೆ ಸಿಗುವ ಕಾರ್ಯದಲ್ಲಿ ಮುಂಜಾಗ್ರತೆ ವಹಿಸಿ ಮುಖ್ಯಮಂತ್ರಿ ಗಳಲ್ಲಿ ಮನವಿ ಮಾಡಿ ಕೊಂಡಿದ್ದರು.
ಇದಲ್ಲದೆ.. ಕಳೆದ ಕೆಲವು ತಿಂಗಳಿಂದ ಹನೂರು ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳನ್ನು ಕೈಗೆತ್ತಿ ಕೊಳ್ಳಬೇಕೆಂದು ರೈತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಂಸದ ಸುನೀಲ್ ಬೋಸ್ ಅವರು..ರೈತರಿಗೆ ಭರವಸೆ ನೀಡಿ, ಮುಂದಿನ ಬಜೆಟ್ ನಲ್ಲಿ ನೀರಾವರಿ ಯೋಜನೆಗೆ ಅನುದಾನ ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ನೀರಾವರಿ ಯೋಜನೆಗೆ 490 ಕೋಟಿ ಮಂಜೂರು ಮಾಡಿಸಿದ್ದಾರೆ ಕ್ಷೇತ್ರದ ಜನತೆ ಮತ್ತು ರೈತರ ಪರವಾಗಿ ಸಚಿವ ಮಹಾದೇವಪ್ಪ ಮತ್ತು ಸಂಸದ ಸುನೀಲ್ ಬೋಸ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ವಕ್ತಾರ ಮಧುವನಹಳ್ಳಿ ಶಿವಕುಮಾರ್ ತಿಳಿಸಿದ್ದಾನೆ.

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top