/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಬುದ್ದ ಅಂಬೇಡ್ಕರ್ ಭಾವಚಿತ್ರ ವಿರೂಪಗೊಳಿಸಿದವರಿಗೆ ಉಗ್ರ ಶಿಕ್ಷೆ ನೀಡಲು ಒತ್ತಾಯ
Image

ಬುದ್ದ ಅಂಬೇಡ್ಕರ್ ಭಾವಚಿತ್ರ ವಿರೂಪಗೊಳಿಸಿದವರಿಗೆ ಉಗ್ರ ಶಿಕ್ಷೆ ನೀಡಲು ಒತ್ತಾಯ

ಚಕೊಳ್ಳೇಗಾಲ. ತಾಲ್ಲೂಕು ಜೈ ಭೀಮ್ ರೈತ ಸಂಘದ ವತಿಯಿಂದ ಜ್ಯೋತಿಗೌಡನಪುರ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಬುದ್ಧನ ವಿಗ್ರಹವನ್ನು ವಿರೂಪಗೊಳಿಸಿರುವ ಹೀನಕೃತ್ಯವನ್ನು ಖಂಡಿಸಿ, ಅಪರಾಧಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಎಪಿಎಂಸಿ ಆವರಣದಲ್ಲಿ ಮಂಗಳವಾರ ಜೈ ಭೀಮ ರೈತ ಸಂಘದ ಪದಾಧಿಕಾರಿಗಳು ಸಭೆ ಕರೆದು ಬಳಿಕ ಮೌನ ಮೆರವಣಿಗೆ ಮೂಲಕ ಡಾ.ಅಂಬೇಡ್ಕರ್ ವೃತ್ತಕ್ಕೆ ತೆರಳಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ತಾಲ್ಲೂಕು ಕಚೇರಿಗೆ ತೆರಳಿ ತಪ್ಪಿಸ್ಥರನ್ನು ಬಂಧಿಸಿ, ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ತಹಶಿಲ್ದಾರ್ ಬಸವರಾಜು ರವರಿಗೆ ಮನವಿ ಸಲ್ಲಿಸಿದರು.

ಜೇತವನ ಬೌದ್ಧ ವಿಹಾರದ ಮನೋರಖಿತ ಬಂತೇಜಿ ಅವರು ಮಾತನಾಡಿ ಸಮಾಜದ ಶಾಂತಿ ಹಾಗೂ ಸೌಹಾರ್ದತೆಯನ್ನು ಭಂಗಪಡಿಸುವ ಉದ್ದೇಶದಿಂದ ಇಂತಹ ನಾಚಿಕೆಗೇಡಿತನದ ಕೃತ್ಯಗಳು ನಡೆಯುತ್ತಿವೆ. ಸರ್ಕಾರ ತಕ್ಷಣ ಕ್ರಮ ಕೈಗೊಂಡು ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹಿರಿಯ ರೈತ ಮುಖಂಡರಾದ ಅಣಗಳ್ಳಿ ಬಸವರಾಜು, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷರು ಆನಂದಮೂರ್ತಿ, ಕಾರ್ಯದರ್ಶಿ ಪಾಪಣ್ಣ, ಜೈ ಭೀಮ್ ರೈತ ಸಂಘ ಅಧ್ಯಕ್ಷ ಮಲ್ಲರಾಜು, ಕಾರ್ಯದರ್ಶಿ ಮುರುಳಿಧರ್, ಹಿರಿಯ ಮುಖಂಡರು ಅಣಗಳ್ಳಿ ಬಸವರಾಜು, ಕೆಂಪರಾಜು, ಚಾಮರಾಜು, ಕರವೇ (ಪ್ರವೀಣ್ ಶೆಟ್ಟಿ ಬಣ) ಜಿಲ್ಲಾಧ್ಯಕ್ಷರು ಮೋಹನ್, ಕಾರ್ಯದರ್ಶಿ ರಿಯಾಜ್ ಪಾಷ ಹಾಗೂ ರೈತರು ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ವರದಿ : ನಿಂಪು ರಾಜೇಶ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top