/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಜಾತಿ ಸಮೀಕ್ಷೆ ಹೆಸರಿನಲ್ಲಿ ಸಮುದಾಯಗಳ ವಿಭಜನೆ : ಜಗದೀಶ್ ಶೆಟ್ಟರ್ ಆರೋಪ
Image

ಜಾತಿ ಸಮೀಕ್ಷೆ ಹೆಸರಿನಲ್ಲಿ ಸಮುದಾಯಗಳ ವಿಭಜನೆ : ಜಗದೀಶ್ ಶೆಟ್ಟರ್ ಆರೋಪ

ಕೊಳ್ಳೇಗಾಲ. ಜಾತಿ ಸಮೀಕ್ಷೆ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮುದಾಯಗಳನ್ನು ವಿಭಜಿಸುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಚಾ.ನಗರದಲ್ಲಿ ಕಾರ್ಯಕ್ರಮ ನಿಮ್ಮಿತ್ತ ಪಟ್ಟಣಕ್ಕೆ ಆಗಮಿಸಿದ ಶೆಟ್ಟರ್ ಅವರು ಮಾಧ್ಯಮವರ ಜೊತೆ ಮಾತನಾಡಿ, ಲಿಂಗಾಯತ, ಒಕ್ಕಲಿಗ ಹಾಗೂ ಹಿಂದುಳಿದ ಸಮುದಾಯಗಳನ್ನು ಒಡೆಯುವ ರಾಜಕೀಯ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಸಮಾಜವನ್ನು ಹೊಡೆದು ತಾವು ಅಧಿಕಾರವನ್ನು ಮುಂದುವರಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಜ್ಜೆ ಇಟ್ಟಿದ್ದಾರೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಸ್ಥಾನದಲ್ಲಿರುವ ವ್ಯಕ್ತಿಯು ಎಲ್ಲರೊಂದಿಗೆ ಗೌರವಯುತವಾಗಿ ವರ್ತಿಸಬೇಕು ಒಬ್ಬ ಲೋಕಸಭಾ ಸದಸ್ಯರೊಂದಿಗೆ ಲಘುವಾಗಿ ಮಾತನಾಡುವುದು ಸಮಂಜಸವಲ್ಲ. ಸಿದ್ದರಾಮಯ್ಯ ಅವರ ಶೈಲಿಯಲ್ಲಿ ಮಾತನಾಡುವುದು ಮುಖ್ಯಮಂತ್ರಿಯ ಸ್ಥಾನಕ್ಕೆ ಯೋಗ್ಯವಲ್ಲ, ಎಂದು ಕಿಡಿಕಾರಿದರು.
ಹಣದ ಅಹಂಕಾರ ಮತ್ತು ಅಧಿಕಾರದ ಮದದಿಂದ ಸಿದ್ದರಾಮಯ್ಯ ಬೇಗನೆ ಅಳಿಯಲಿದ್ದಾರೆ,ಎಂದು ಟೀಕಿಸಿದರು.

ರಾಜ್ಯ ಸರ್ಕಾರದೊಳಗಿನ ಆಂತರಿಕ ಜಗಳದಿಂದ ಜನತೆ ಗೊಂದಲಕ್ಕೊಳಗಾಗಿದ್ದಾರೆ. ಸರ್ಕಾರದ ವ್ಯವಸ್ಥೆ ಅವ್ಯವಸ್ಥೆಯಿಂದ ಕೂಡಿದೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಶೆಟ್ಟರ್ ದೂರಿದರು.
ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು ನಿರಂಜನ್ ಕುಮಾರ್, ಬಿಜೆಪಿ ರಾಜ್ಯ ಉಪಾಧ್ಯಕ್ಷರು ಎನ್.ಮಹೇಶ್, ಮಾಜಿ ಶಾಸಕ ಎಸ್.ಬಾಲರಾಜು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ಡಾ.ದತ್ತೇಶ್ ಕುಮಾರ್, ನಗರ ಮಂಡಲ ಅಧ್ಯಕ್ಷರು ಚಿಂತು ಪರಮೇಶ್,
ಪಿಎಸಿಸಿಎಸ್ ಸಂಘದ ಅಧ್ಯಕ್ಷರು ರಮೇಶ್, ಎಸ್ಸಿ ಮೋರ್ಚಾ ಸಿದ್ದಪ್ಪಾಜಿ ಹಾಗೂ ಕಾರ್ಯಕರ್ತರು ಇದ್ದರು.

ವರದಿ : ನಿಂಪು ರಾಜೇಶ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top