/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಹುಲಿಗಳ ಸಾವಿನ ಸಮಗ್ರ ತನಿಖೆಗೆ ಶಾಸಕ ಎಂ.ಆರ್. ಮಂಜುನಾಥ್ ಒತ್ತಾಯ
Image

ಹುಲಿಗಳ ಸಾವಿನ ಸಮಗ್ರ ತನಿಖೆಗೆ ಶಾಸಕ ಎಂ.ಆರ್. ಮಂಜುನಾಥ್ ಒತ್ತಾಯ

ಹನೂರು : ತಾಲೂಕಿನ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಹುಲಿ ಸಾವನ್ನಪ್ಪಿರುವ ಬಗ್ಗೆ ಸರ್ಕಾರ ಗಂಭೀರವಾಗಿ ಪ್ರಕರಣವನ್ನು ಕೈಗೆತ್ತಿಕೊಂಡು ಸಂಬಂಧಿಸಿದ ಹಿರಿಯ ಅಧಿಕಾರಿಗಳ ತಂಡ ರಚನೆ ಮಾಡಿ ಸಮಗ್ರ ವರದಿ ನಂತರ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಎಂ.ಆರ್ ಮಂಜುನಾಥ್ ಒತ್ತಾಯಿಸಿದ್ದಾರೆ…

ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹನೂರು ಬಪ್ಪರ್ ಜೋನ್ ವಲಯದ ಪಚ್ಚೆದೊಡ್ಡಿ ವನ್ಯಜೀವಿ ವಿಭಾಗದ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಗಸ್ತಿನಲ್ಲಿದ್ದಾಗ ಹುಲಿ ಕಳೆಬರಹ ಕಂಡುಬಂದಿದ್ದು ತಾಲೂಕಿನಲ್ಲಿ ಹುಲಿ ಸಾವನ್ನಪ್ಪಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಸೂಕ್ತ ತನಿಖೆ ನಡೆಸಿ ಸರ್ಕಾರ ಗಂಭೀರವಾಗಿ ಪರಿಗಣಿಸಿ ಹಿರಿಯ ಅಧಿಕಾರಿಗಳ ತಂಡ ರಚನೆ ಮಾಡಿ ಸಾವಿಗೆ ನಿಖರವಾದ ಸಮಗ್ರ ವರದಿಯನ್ನು ನೀಡುವಂತೆ ಇದೆ ವೆಳೆಯಲ್ಲಿ ಒತ್ತಾಯಿಸಿದರು

ಕಾಡು ಪ್ರಾಣಿಗಳ ಸಾವು ಆತಂಕಕಾರಿ ಬೆಳವಣಿಗೆ : ಹನೂರು ತಾಲೂಕಿನಲ್ಲಿ ಹೂಗ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಸೇರಿದಂತೆ ನಾಲ್ಕು ಮರಿಗಳು ಸತ್ತ ಪ್ರಾಣಿಯ ವಿಷಪ್ರಾಸನದ ಮಾಂಸ ತಿಂದು ಸಾವನ್ನಪ್ಪಿದ್ದು ಜೊತೆಗೆ ಕಾವೇರಿ ವನ್ಯ ಧಾಮದಲ್ಲಿ ಇತ್ತೀಚೆಗೆ ಎರಡು ಹುಲಿ ಮರಿಗಳು ಸಹ ಆಹಾರ ಇಲ್ಲದೆ ಸಾವನ್ನಪ್ಪಿದೆ ಜೊತೆಗೆ ತಾಲೂಕಿನಲ್ಲಿ ಇತ್ತೀಚೆಗೆ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳು ಚಿರತೆ ಸೇರಿದಂತೆ ಇತರ ಪ್ರಾಣಿಗಳು ಸಹ ಸಾವನ್ನಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಹೀಗಾಗಿ ಸರ್ಕಾರ ಗಂಭೀರವಾಗಿ ಪ್ರಕರಣವನ್ನು ಪರಿಗಣಿಸಿ ಅರಣ್ಯ ಇಲಾಖೆ ಸಚಿವರು ಹಾಗೂ ಹಿರಿಯ ಅರಣ್ಯಾಧಿಕಾರಿಗಳು ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಸಾವಿನ ಬಗ್ಗೆ ನಿಖರವಾದ ವರದಿಯನ್ನು ನೀಡಬೇಕು ಮುಂದೆ ತಾಲೂಕಿನಲ್ಲಿ ಕಾಡು ಪ್ರಾಣಿಗಳು ಜೀವ ಕಳೆದುಕೊಳ್ಳುವುದನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಈ ನಿಟ್ಟಿನಲ್ಲಿ ಅರಣ್ಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ…

ಪಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಹುಲಿಯ ತಲೆ ಭುಜ ಮುಂಗಾಲುಗಳು ಪತ್ತೆಯಾಗಿದೆ ಉಳಿತ ಭಾಗಗಳು ಸಿಕ್ಕಿಲ್ಲ ಅರಣ್ಯ ಇಲಾಖೆಗೆ ಸಿಕ್ಕಿರುವ ಕಳೆಬರಹದಲ್ಲಿ ಉಗುರುಗಳು ಮತ್ತು ಹಲ್ಲುಗಳು ಇದ್ದು ಇನ್ನು ಉಳಿದ ಭಾಗವನ್ನು ಹುಡುಕಲು ಅರಣ್ಯಾಧಿಕಾರಿಗಳು ಕ್ರಮ ವಹಿಸಬೇಕು ಕಳ್ಳ ಬೇಟೆಯ ಪ್ರಕರಣ ಎಂದು ಪರಿಗಣಿಸಿ ತನಿಖೆ ಕೈಗೊಳ್ಳಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ಒತ್ತಾಯಿಸಿದ್ದಾರೆ….

ವರದಿ : ನಿಂಪು ರಾಜೇಶ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top