/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ ಅಂಬೇಡ್ಕರ್ ಭವನ ಕಾಮಗಾರಿಗೆ ತಾತ್ಕಾಲಿಕ ತಡೆ : ಬೀಗ ಜಡಿದ ಕೆ.ಆರ್. ಐ.ಡಿ.ಎಲ್. ಅಧಿಕಾರಿ
Image

ಕೊಳ್ಳೇಗಾಲ ಅಂಬೇಡ್ಕರ್ ಭವನ ಕಾಮಗಾರಿಗೆ ತಾತ್ಕಾಲಿಕ ತಡೆ : ಬೀಗ ಜಡಿದ ಕೆ.ಆರ್. ಐ.ಡಿ.ಎಲ್. ಅಧಿಕಾರಿ

ಕೊಳ್ಳೇಗಾಲ: ಕೊಳ್ಳೇಗಾಲ ಪಟ್ಟಣದಲ್ಲಿ ನಿರ್ಮಾಣ ಆಗುತ್ತಿರುವ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಯನ್ನು ಕೆ.ಆರ್.ಐ.ಡಿ.ಎಲ್ ಹಿರಿಯ ಅಧಿಕಾರಿಗಳ ಸೂಚನೆಯ ಮೇರೆಗೆ ಗುರವಾರದಿಂದ ಭವನ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಬೆಂಗಳೂರು ಕೆ.ಆರ್. ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಿಂದ ಬಂದ ಆದೇಶದ ಮೇರೆಗೆ ಕೊಳ್ಳೇಗಾಲ ಕೆ.ಆರ್.ಐ.ಡಿ.ಎಲ್. ಸಹಾಯಕ ಅಭಿಯಂತರರಾದ ಚಿಕ್ಕಲಿಂಗಯ್ಯ ಅವರು ಗುರುವಾರ ಸಾಯಂಕಾಲ ಅಂಬೇಡ್ಕರ್ ಭವನಕ್ಕೆ ತೆರಳಿ ಕಾಮಗಾರಿಯನ್ನು ನಿಲ್ಲಿಸಿ ಮುಂಬಾಗಿಲಿಗೆ ಬೀಗ ಜಡಿದಿದ್ದಾರೆ.

ಈ ಬೆಳವಣಿಗೆಯಿಂದ ಇದೇ ತಿಂಗಳು 29 ರಂದು ಅಂಬೇಡ್ಕರ್ ಭವನ ಉದ್ಘಾಟನೆಗೆ ಮುಂದಾಗಿದ್ದ ಆನಂದಮೂರ್ತಿ ಅದ್ಯಕ್ಷರಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಸ್ಮಾರಕ ಸಂಘಕ್ಕೆ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ರಿದೆ.

ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳ್ಳದೇ ಭವನ ಉದ್ಘಾಟನೆಗೆ ಮುಂದಾಗಿರುವ ಸ್ಮಾರಕ ಸಂಘದ ನಿರ್ಧಾರವನ್ನು ಪ್ರಶ್ನಿಸಿ ಭೀಮನಗರದ ಅನೇಕರು ಕುಲದವರಿಗೆ ಪತ್ರ ನೀಡಿದ್ದಾರೆ. ಇದೇ ವಿಷಯವಾಗಿ ಶನಿವಾರ ಬೆಳಿಗ್ಗೆ ಭೀಮ ನಗರದಲ್ಲಿ ಕುಲಸ್ಥರ ಸಭೆ ಕರೆಯಲಾಗಿದೆ ಎಂದು ತಿಳಿದು ಬಂದಿದೆ.

ಭೀಮನಗರದ ಜನತೆಯ ಸಮ್ಮುಖದಲ್ಲಿ ಅಂಬೇಡ್ಕರ್ ಭವನ ಉದ್ಘಾಟನೆಗೆ ದಿನಾಂಕ ನಿಗದಿ ಮಾಡದೇ..ಕೇವಲ ಬೆರಳಣಿಕೆ ಮಂದಿ ಪತ್ರಿಕಾ ಗೋಷ್ಠಿಯಲ್ಲಿ ಇದೇ ತಿಂಗಳು 29 ರಂದು ಭವನ ಉದ್ಘಾಟನೆ ನಡೆಸುವ ಬಗ್ಗೆ ಹೇಳಿರುವುದು ಭೀಮನಗರದ ಅನೇಕ ಮುಖಂಡರನ್ನು ಕೆರಳಿಸಿದೆ.

ಅಂಬೇಡ್ಕರ್ ಭವನ ಕಾಮಗಾರಿ ಮೂಲನಕ್ಷೆಯಂತೆ ನಡೆದಿಲ್ಲ ಎಂಬುದು ಅನೇಕರ ಪ್ರಶ್ನೆ ಆಗಿದೆ.

ವರದಿ : ನಿಂಪು ಬ್ರದರ್ಸ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top