/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವರಾಗುವ ಅರ್ಹತೆ ಮತ್ತು ಸಾಮರ್ಥ್ಯ ಇದೆ – ಸಂಸದ ಸುನೀಲ್ ಬೋಸ್
Image

ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವರಾಗುವ ಅರ್ಹತೆ ಮತ್ತು ಸಾಮರ್ಥ್ಯ ಇದೆ – ಸಂಸದ ಸುನೀಲ್ ಬೋಸ್

ಕೊಳ್ಳೇಗಾಲ : ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವರಾಗುವ ಅರ್ಹತೆ ಮತ್ತು ಸಾಮರ್ಥ್ಯ ಎರಡೂ ಇದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸತ್‌ ಸದಸ್ಯರಾದ ಸುನೀಲ್ ಬೋಸ್ ತಿಳಿಸಿದರು.

ಕೊಳ್ಳೇಗಾಲ ನಗರಸಭ ವ್ಯಾಪ್ತಿಯ ಶಂಕನಪುರ ಬಡಾವಣೆಯಲ್ಲಿ ಸೋಮವಾರ ವೆಟ್ ವೆಲ್ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದ ಸಂಸದ ಸುನೀಲ್ ಬೋಸ್ ಅವರು ನಂತರ ಮಾದ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದರು.

ಸಂಪುಟ ಪುನರ್ ರಚನೆಯಾದರೆ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನ ಸಿಗುವ ಅವಕಾಶ ಇದೆಯೇ ಎಂದು ಪತ್ರಕರ್ತರು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಂಸದ ಸುನೀಲ್ ಬೋಸ್ ಅವರು, ಎ.ಆರ್. ಕೃಷ್ಣಮೂರ್ತಿ ಅವರು ರಾಜಕಾರಣದಲ್ಲಿ ಹಿರಿಯರು, 1994 ರಿಂದಲೂ ರಾಜಕಾರಣದಲ್ಲಿ ಇದ್ದಾರೆ. ಅವರಿಗೆ ಸಚಿವರಾಗುವ ಅರ್ಹತೆ ಮತ್ತು ಸಾಮರ್ಥ್ಯ ಎರಡೂ ಇದೆ. ಈ ಭಾಗದ ಸಂಸತ್ ಸದಸ್ಯನಾಗಿ ನಾನೂ ಕೂಡಾ ಅವರು ಸಚಿವರಾಗಲು ಬಯಸುತ್ತೇನೆ ಎಂದರು.

ವರದಿ – ನಿಂಪು ರಾಜೇಶ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top